ಕರ್ನಾಟಕ

karnataka

ETV Bharat / bharat

ಸೆರಂ ಇನ್ಸ್​ಟಿಟ್ಯೂಟ್​ನಲ್ಲಿ ಭಾರಿ ಅಗ್ನಿ ಅವಘಡ: ಎನ್​ಡಿಆರ್​ಎಫ್ ಕಾರ್ಯಾಚರಣೆ ​​ಚುರುಕು

Fire breaks out at Serum Institute of India in Pune
ಸೀರಂ ಇನ್ಸ್​ಟಿಟ್ಯೂಟ್​ ಆಫ್​ ಇಂಡಿಯಾದಲ್ಲಿ ಅಗ್ನಿ ಅವಘಡ

By

Published : Jan 21, 2021, 3:22 PM IST

Updated : Jan 21, 2021, 4:54 PM IST

15:18 January 21

ಸೆರಂ ಇನ್ಸ್​ಟಿಟ್ಯೂಟ್​ ಆಫ್​ ಇಂಡಿಯಾದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಇದರಿಂದ ಕೋವಿಶೀಲ್ಡ್​ ಲಸಿಕೆ ಉತ್ಪಾದನೆಗೆ ಯಾವುದೇ ತೊಂದರೆ ಇಲ್ಲವೆಂದು ಮೂಲಗಳು ತಿಳಿಸಿವೆ.

ಪುಣೆ(ಮಹಾರಾಷ್ಟ್ರ):ಜಗತ್ತಿನ ಅತಿ ದೊಡ್ಡ ಕೊರೊನಾ ಲಸಿಕೆ ಉತ್ಪಾದನಾ ಕೇಂದ್ರವಾದ ಪುಣೆಯ ಸೆರಂ ಇನ್ಸ್​ಟಿಟ್ಯೂಟ್​ ಆಫ್​ ಇಂಡಿಯಾದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಲಸಿಕೆ ತಯಾರಿಕಾ ಕೇಂದ್ರದಿಂದ ಅನತಿ ದೂರದಲ್ಲಿರುವ ಮಂಜ್ರಿ ಪ್ಲಾಂಟ್​ನ ಟರ್ಮಿನಲ್ ಒಂದರ ನಿರ್ಮಾಣ ಹಂತದ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೋವಿಶೀಲ್ಡ್ ಲಸಿಕೆ ಉತ್ಪಾದನೆಗೆ ಯಾವುದೇ ತೊಂದರೆಯಿಲ್ಲ ಎಂದು ಮೂಲಗಳು ತಿಳಿಸಿವೆ.

ಈಗ ಸದ್ಯಕ್ಕೆ ವಿಜ್ಞಾನಿಗಳನ್ನು ಸ್ಥಳಾಂತರ ಮಾಡಲಾಗಿದ್ದು, ಅವಘಡ ನಡೆದ ಸ್ಥಳದಿಂದ ಮೂವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. 

ಮಾಹಿತಿ ಪಡೆಯುತ್ತಿರುವ ಉದ್ಧವ್ ಠಾಕ್ರೆ

ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಪುಣೆ ಮುನಿಸಿಪಲ್ ಆಯುಕ್ತರೊಂದಿಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸಂಪರ್ಕದಲ್ಲಿದ್ದು, ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.

ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

Last Updated : Jan 21, 2021, 4:54 PM IST

ABOUT THE AUTHOR

...view details