ಹೈದರಾಬಾದ್(ತೆಲಂಗಾಣ):ತೆಲಂಗಾಣದ ವಿಕರಾಬಾದ್ ಜಿಲ್ಲೆಯ ಬಳಿ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಇಂಜಿನ್‌ನಲ್ಲಿ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ದಕ್ಷಿಣ ಮಧ್ಯ ರೈಲ್ವೆ (ಎಸ್‌ಸಿಆರ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ನವಾಂಡ್ಗಿ ರೈಲ್ವೆ ನಿಲ್ದಾಣವನ್ನು ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಎಸ್‌ಸಿಆರ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಕೇಶ್ ತಿಳಿಸಿದ್ದಾರೆ.