ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾರ್ತ್ 24 ಪರಗಣ ಜಿಲ್ಲೆಯ ನೈಹತಿ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಪೋಟ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ.
ಅಣುಬಾಂಬ್ನಂತೆ ಸ್ಪೋಟಗೊಂಡ ಪಟಾಕಿ ಕಾರ್ಖಾನೆಯ ವಿಡಿಯೋ ನೋಡಿ - ಪಟಾಕಿ ಕಾರ್ಖಾನೆ ಸ್ಪೋಟ
ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸ್ಪೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟು ಕೆಲವರು ಗಾಯಗೊಂಡಿದ್ದರು. ಮಾಲೀಕ ನೂರ್ ಹುಸೇನ್ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪಟಾಕಿ ಕಾರ್ಖಾನೆ
ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆ ಮಾಲೀಕನನ್ನು ಬಂಧಿಸಲಾಗಿದೆ. ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸ್ಪೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟು ಕೆಲವರು ಗಾಯಗೊಂಡಿದ್ದರು. ಮಾಲೀಕ ನೂರ್ ಹುಸೇನ್ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಕಚ್ಛಾ ಬಾಂಬ್ ತಯಾರಿಸಲಾಗುತ್ತಿದೆ ಎಂಬ ದೂರುಗಳಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಹೆಚ್ಚಿನ ತನಿಖೆಗೆ ಆದೇಶಿಸಿದ್ದರು. ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಫೋಟ ಸಂಭವಿಸಿದ ಕಾರ್ಖಾನೆಗೆ ತೆರಳಿ ಅವಶೇಷಗಳ ಮಾದರಿಗಳನ್ನು ಸಂಗ್ರಹಿಸಿ ತನಿಖೆ ಚುರುಕುಗೊಳಿಸಿದ್ದಾರೆ.