ಕರ್ನಾಟಕ

karnataka

By

Published : Jan 30, 2020, 2:59 PM IST

ETV Bharat / bharat

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಅಪರಿಚಿತ ವ್ಯಕ್ತಿಯಿಂದ ಫೈರಿಂಗ್: ಜಾಮಿಯಾ ವಿ.ವಿ ವಿದ್ಯಾರ್ಥಿಗೆ ಗಾಯ

ಸಿಎಎ ವಿರೋಧಿಸಿ ಇಂದು ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಇದ್ದಕ್ಕಿಂದ್ದಂತೆ ಅಪರಿಚಿತ ವ್ಯಕ್ತಿಯೋರ್ವ ಕೈಯಲ್ಲಿ ಗನ್​ ಹಿಡಿದು ಬಂದು ಫೈರಿಂಗ್ ನಡೆಸಿದ್ದಾನೆ. ಘಟನೆಯಲ್ಲಿ ಜಾಮಿಯಾ ಮಿಲಿಯಾ ವಿವಿ ವಿದ್ಯಾರ್ಥಿ ಗಾಯಗೊಂಡಿದ್ದಾನೆ.

Unknown person opened fire in Jamia
ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಅಪರಿಚಿತ ವ್ಯಕ್ತಿಯಿಂದ ಫೈರಿಂಗ್

ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಫೈರಿಂಗ್ ನಡಸಿದ್ದು, ಘಟನೆಯಲ್ಲಿ ಜಾಮಿಯಾ ಮಿಲಿಯಾ ವಿವಿ ವಿದ್ಯಾರ್ಥಿಗೆ ಗಾಯವಾಗಿದೆ.

ಸಿಎಎ ವಿರೋಧಿಸಿ ಇಂದು ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಇದ್ದಕ್ಕಿಂದ್ದಂತೆ ಅಪರಿಚಿತ ವ್ಯಕ್ತಿಯೋರ್ವನು ಕೈಯಲ್ಲಿ ಗನ್​ ಹಿಡಿದು ಬಂದು ಫೈರಿಂಗ್ ನಡೆಸಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಪ್ರತಿಭಟನಾನಿರತ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಶ್ನೆಗಳನ್ನು ಕೇಳುತ್ತಾ ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details