ಪುಣೆ(ಮಹಾರಾಷ್ಟ್ರ):ಎರಡು ವಾರಗಳ ಹಿಂದೆ ಮಹಾರಾಷ್ಟ್ರದಲ್ಲಿ ಪತ್ತೆಯಾಗಿದ್ದ ಮೊದಲೆರಡು ಕೊರೊನಾ ಸೋಂಕಿತರು ಗುಣಮುಖರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಗುಡ್ ನ್ಯೂಸ್: ಮಹಾರಾಷ್ಟ್ರದ ಮೊದಲೆರೆಡು ಕೊರೊನಾ ಸೋಂಕಿತರು ಗುಣಮುಖ.. ಇಂದು ಡಿಸ್ಚಾರ್ಜ್ - ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖ
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರು ನೂರರ ಗಡಿ ದಾಟಿದ್ದು, ಮೊದಲೆರಡು ಸೋಂಕಿತರು ಗುಣಮುಖರಾಗಿದ್ದಾರೆ. 2 ಬಾರಿ ಪರೀಕ್ಷೆಯಲ್ಲೂ ಸೋಂಕು ಕಾಣಿಸದ ಕಾರಣ ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಗುತ್ತಿದೆ.
ಮೊದಲೆರೆಡು ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖ
ಎರಡು ಬಾರಿ ಪರೀಕ್ಷೆ ನಡೆಸಿದಾಗಲೂ ಅವರಲ್ಲಿ ಯಾವುದೇ ಸೋಂಕು ಕಂಡುಬಂದಿಲ್ಲ. ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಪುಣೆ ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಳಿದ್ದಾರೆ.
ಮಹಾರಾಷ್ಟ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಮಂಗಳವಾರ ಆರು ಜನರಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಸೋಂಕಿತರ ಸಂಖ್ಯೆ 107ಕ್ಕೆ ತಲುಪಿದೆ ಎಂದಿದ್ದಾರೆ.