ಶ್ರೀನಗರ :ಕಾಶ್ಮೀರದ ಮೊದಲ ಕೊರೊನಾ ಸೋಂಕಿತ ರೋಗಿಯು ಸಂಪೂರ್ಣವಾಗಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಈ ಬಗ್ಗೆ ಕೇಂದ್ರಾಡಳಿತ ಪ್ರದೇಶದ ಆಡಳಿತ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ತಿಳಿಸಿದ್ದಾರೆ.
ಕಾಶ್ಮೀರದ ಮೊದಲ ಕೊರೊನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್.. - ಕಾಶ್ಮೀರದ ಮೊದಲ ಕೊರೊನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಜಮ್ಮು ಮತ್ತು ಕಾಶ್ಮೀರದಲ್ಲಿ ಈವರೆಗೆ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 70ಕ್ಕೇರಿದೆ. ಇಂದು ಒಂದೇ ದಿನ ಜಮ್ಮು ಪ್ರಾಂತ್ಯದಲ್ಲಿ ಐದು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೆ, ಕಾಶ್ಮೀರ ಪ್ರದೇಶದಲ್ಲಿ ಮೂವರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಇಂದು ಸೋಂಕಿತರೊಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಮುಕ್ತಿ ಪಡೆದಿದ್ದಾರೆ.

ಈವರೆಗೆ 10,694 ವ್ಯಕ್ತಿಗಳನ್ನು ಕ್ವಾರಂಟೈನ್ನಲ್ಲಿಡಲಾಗಿದೆ. 65 ಮಂದಿ ಆಸ್ಪತ್ರೆಗಳಲ್ಲಿ ಐಸೋಲೇಷನ್ನಲ್ಲಿದ್ದಾರೆ. 622 ಆಸ್ಪತ್ರೆಯಲ್ಲಿ ಕ್ವಾರಂಟೈನ್ ಆಗಿದ್ರೆ, 4,109 ಜನರನ್ನು ಮನೆಯಲ್ಲೇ ಸರ್ಕಾರದ ಕಣ್ಗಾವಲಿನಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈವರೆಗೆ ಇಬ್ಬರು ಸಾವನ್ನಪ್ಪಿದ್ದಾರೆ.
TAGGED:
Kashmir corona update