ಬರೇಲಿ:ಉತ್ತರಪ್ರದೇಶದ ಬರೇಲಿಯಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿ ತದನಂತರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಘಟನೆ ನಡೆದಿದೆ.
ಇಬ್ಬರು ಅಪ್ರಾಪ್ತೆಯರ ಮೇಲೆ ಐವರು ಕಾಮುಕರು ಅತ್ಯಾಚಾರ... ವಿಡಿಯೋ ವೈರಲ್ ಮಾಡಿದ್ರು! - ಸಾಮೂಹಿಕ ಅತ್ಯಾಚಾರ
ಐವರು ಕಾಮುಕರು ಸೇರಿ ಇಬ್ಬರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದ್ದು, ಅದರ ವಿಡಿಯೋ ವೈರಲ್ ಮಾಡಿದ್ದಾರೆ.
ನವೆಂಬರ್ 17ರಂದು ಈ ಘಟನೆ ನಡೆದಿದ್ದು, ಇಬ್ಬರು ಅಪ್ರಾಪ್ತೆಯರ ಅಪಹರಣ ಮಾಡಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಆತನ ನಾಲ್ವರು ಗೆಳೆಯರೊಂದಿಗೆ ಸೇರಿ ಈ ದುಷ್ಕೃತ್ಯವೆಸಗಿದ್ದಾನೆ. ಇದರ ಸಂಪೂರ್ಣ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಮಾಡಿದ್ದಾನೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯರ ಪೊಷಕರು ದೂರು ದಾಖಲು ಮಾಡಿದ್ದಾರೆ.
ಈ ವೇಳೆ ಕೃತ್ಯಕ್ಕೆ ವಿರೋಧ ವ್ಯಕ್ತಪಡಿಸಿದಾಗ ಎಲ್ಲರು ಸೇರಿ ಅವರ ಮೇಲೆ ಹಲ್ಲೆ ಸಹ ನಡೆಸಿದ್ದಾರೆ. ಘಟನೆಯ ವಿಡಿಯೋ ಕುರಿತು ಗ್ರಾಮಸ್ಥರಿಗೆ ಗೊತ್ತಾಗುತ್ತಿದ್ದಂತೆ ಇವರು ತಲೆಮರೆಸಿಕೊಂಡಿದ್ದಾಗಿ ತಿಳಿದು ಬಂದಿದೆ. ಇದೀಗ ಬಾಲಕಿಯರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.