ಡೆಹ್ರಾಡೂನ್(ಉತ್ತರಾಖಾಂಡ್):ಇಲ್ಲಿನ ಟೋನ್ಸ್ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇಂದು ರಭಸವಾಗಿ ಹರಿದು ಬಂದ ಪ್ರವಾಹದಿಂದಾಗಿ ಉತ್ತರಕಾಶಿ ಜಿಲ್ಲೆಯ ಕನಿಷ್ಟ 20 ಮನೆಗಳು ಕೊಚ್ಚಿ ಹೋಗಿವೆ. ಹೀಗಾಗಿ ಸುಮಾರು 18 ಜನರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿವೆ.
ಉತ್ತರಕಾಶಿಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭಾರಿ ಪ್ರವಾಹವು ಇತ್ತೀಚೆಗೆ ಇಲ್ಲಿನ ಸ್ಥಳೀಯ ಮಾರುಕಟ್ಟೆಗಳನ್ನು ತಿಂದುಬಿಟ್ಟಿತ್ತು. ಬಳಿಕ ಇಲ್ಲಿನ ಸರ್ಕಾರವು ಸ್ಥಳಿಯ ಜನತೆಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಿತ್ತು.
ಪ್ರವಾಹದಿಂದ ತತ್ತರಿಸಿರುವ ಉತ್ತರಕಾಶಿ ಜಿಲ್ಲೆಯ ಭಾಗಗಳಲ್ಲಿ ರಕ್ಷಣಾ ಕಾರ್ಯ ನಡೆಸಿ, ನಿರಾಶ್ರಿತರನ್ನು ಸ್ಥಳಾಂತರಿಸುವಂತೆ ಉತ್ತರಾಖಾಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಉತ್ತರಕಾಶಿ ಜಿಲ್ಲಾಧಿಕಾರಿ ಮತ್ತು ವಿಪತ್ತು ನಿರ್ವಹಣಾ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ಒದಗಿಸುವಂತೆ ಸೂಚನೆ ನೀಡಿದ್ದಾರೆ.