ನವದೆಹಲಿ/ಬೆಂಗಳೂರು:ವಿದೇಶದಿಂದ ಉನ್ನತ ವಿದ್ಯಾಭ್ಯಾಸಕ್ಕೆಂದು ಭಾರತಕ್ಕೆ ಆಗಮಿಸುವ ಯುವ ಜನತೆಗೆ ಕರ್ನಾಟಕ ಅತ್ಯುತ್ತಮ ವಿದ್ಯಾಕಾಶಿ ಎಂದು ಮಾನವ ಸಂಪನ್ಮೂಲ ಇಲಾಖೆಯ ವರದಿ ಹೇಳಿದೆ.
2018-19ರಲ್ಲಿ ವಿದ್ಯಾಭ್ಯಾಸಕ್ಕೆ ಭಾರತಕ್ಕಾಗಮಿಸಿದ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ 47,427 ಆಗಿದ್ದರೆ, 10,023 ವಿದ್ಯಾರ್ಥಿಗಳು ಕರ್ನಾಟಕವನ್ನೇ ಆರಿಸಿಕೊಂಡಿದ್ದಾರೆ ಎಂದು ಅಖಿಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆ ತಿಳಿಸಿದೆ. ಈ ಮೂಲಕ ವಿದೇಶಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಕರ್ನಾಟಕವನ್ನೇ ತಮ್ಮ ಮೊದಲ ಆದ್ಯತೆಯಾಗಿ ಪರಿಗಣಿಸಿದ್ದಾರೆ ಎಂದು ತಿಳಿದು ಬಂದಿದೆ.
ಒಟ್ಟಾರೆ ಭಾರತಕ್ಕೆ ಆಗಮಿಸುವ ವಿದೇಶಿ ವಿದ್ಯಾರ್ಥಿಗಳ ಸರಾಸರಿ ಪ್ರಮಾಣದಲ್ಲಿ ಕರ್ನಾಟಕದ ಪಾಲು ಶೇ.20ರಿಂದ ಶೇ.35ರ ನಡುವೆ ಇರುತ್ತದೆ ಎಂದು ಮಾನವ ಸಂಪನ್ಮೂಲ ಇಲಾಖೆ ಹೇಳಿದೆ.