ನವದೆಹಲಿ :ಗಣರಾಜ್ಯೋತ್ಸವ ಸಂದರ್ಭದಲ್ಲಿ ಕೆಂಪುಕೋಟೆಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರ ತಂಡ ಇಂದು ಕೆಂಪುಕೋಟೆಗೆ ಭೇಟಿ ನೀಡಿತು.
ಪ್ರತಿಭಟನಾನಿರತ ಸಾವಿರಾರು ರೈತರು ತಮ್ಮ ಟ್ರ್ಯಾಕ್ಟರ್ ರ್ಯಾಲಿ ಮಾರ್ಗದಿಂದ ವಿಮುಖರಾಗಿ, ಜನವರಿ26 ರಂದು ಕೆಂಪುಕೋಟೆಗೆ ನುಗ್ಗಿ, ಪೊಲೀಸರೊಂದಿಗೆ ಸಂಘರ್ಷ ನಡೆಸಿದ್ದರು.
ದೆಹಲಿ ಪೊಲೀಸರ ಅಪರಾಧ ವಿಭಾಗವು ಈ ಬಗ್ಗೆ ತನಿಖೆ ನಡೆಸುತ್ತಿದೆ. ಅಪರಾಧಿಗಳನ್ನು ಗುರುತಿಸಲು ಹಲವಾರು ತಂಡಗಳನ್ನು ರಚಿಸಲಾಗಿದೆ. ಕೋಟೆಯಲ್ಲಿನ ವಿಧ್ವಂಸಕ ಕೃತ್ಯವನ್ನು "ರಾಷ್ಟ್ರ ವಿರೋಧಿ ಕ್ರಿಯೆ" ಎಂದು ಅಪರಾಧ ವಿಭಾಗವು ಹೇಳಿದೆ.
ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ತಮ್ಮ ಬೇಡಿಕೆಯನ್ನು ಎತ್ತಿ ಹಿಡಿಯಲು ರೈತ ಸಂಘಗಳು ಕರೆದ ಟ್ರ್ಯಾಕ್ಟರ್ ರ್ಯಾಲಿ ಮೆರವಣಿಗೆಯಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರು.