ಕರ್ನಾಟಕ

karnataka

16 ಅಡಿ ಉದ್ದದ ಬೃಹತ್​ ಕಾಳಿಂಗ ಸೆರೆ... 20 ಗಂಟೆಗಳ ಕಾರ್ಯಾಚರಣೆಯ ವಿಡಿಯೋ ನೋಡಿ

By

Published : May 28, 2020, 12:50 PM IST

Updated : May 28, 2020, 1:13 PM IST

ಸತತ 20 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಡೆಸಿ 16 ಅಡಿ ಉದ್ದದ ಬೃಹತ್​ ಗಾತ್ರದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

cobra
16 ಅಡಿ ಉದ್ದದ ಹೆಬ್ಬಾವು ಸೆರೆ

ಕೇರಳ/ಎರ್ನಾಕುಲಂ:16 ಅಡಿ ಉದ್ದದ ಬೃಹತ್​ ಗಾತ್ರದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿರುವ ದೃಶ್ಯ ಮೈನವಿರೇಳಿಸುವಂತಿದೆ. ಕೇರಳದ ಎರ್ನಾಕುಲಂ ಜಿಲ್ಲೆಯ ಕೊಟ್ಟಮಂಗಲಂನ ವಡತ್ತುಪಾರದಲ್ಲಿ ಸರ್ಪವನ್ನು ಸೆರೆಹಿಡಿಯಲಾಗಿದೆ.

16 ಅಡಿ ಉದ್ದದ ಹೆಬ್ಬಾವು ಸೆರೆ

ಜಮೀನಿನಲ್ಲಿದ್ದ ಹುಣಸೆ ಮರದ ಮೇಲೆ ಹಾವು ಇರುವುದನ್ನು ಕಂಡ ಸ್ಥಳೀಯರು ಭಯದಿಂದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಧಿಕಾರಿಗಳು, ಮಾರ್ಟಿನ್ ಮೀಕ್ಕಮಾಲಿ ಎಂಬ ಹಾವು ಹಿಡಿಯುವವರಿಗೆ ಮಾಹಿತಿ ನೀಡಿ, ಸ್ಥಳಕ್ಕೆ ಬರುವಂತೆ ತಿಳಿಸಿದ್ದರು. ನಂತರ ಅರಣ್ಯ ಇಲಾಖೆ ಅಧಿಕಾರಿಗಳು, ಮಾರ್ಟಿನ್ ಮೀಕ್ಕಮಾಲಿ, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ 20 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಡೆಸಿ ಕೊನೆಗೂ ಹಾವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವಿಷ ಸರ್ಪವನ್ನು ಸೆರೆಹಿಡಿದ ಬಳಿಕ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಹಾವನ್ನು ನೋಡಲು ಜನ ಮುಗಿಬಿದ್ದಿದ್ದರು. ನಂತರ ಹಾವನ್ನು ಕರಿಂಬಾನಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

Last Updated : May 28, 2020, 1:13 PM IST

ABOUT THE AUTHOR

...view details