ಮುಂಬೈ:ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ನಿರೀಕ್ಷೆ ಮಾಡದ ಕೆಲ ಪ್ರಮುಖರು ಭಾಗಿಯಾಗಿ ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದ್ದಾರೆ.
ಸಂಜೆ ಶಿವಾಜಿ ಪಾರ್ಕ್ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬಿಜೆಪಿ ಜತೆ ಉತ್ತಮ ಸಂಬಂಧ ಹೊಂದಿರುವ ಮುಖೇಶ್ ಅಂಬಾನಿ ಹಾಗೂ ಅವರ ಪತ್ನಿ ನೀತಾ ಅಂಬಾನಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಉದ್ಧವ್ ಠಾಕ್ರೆ ಸೋದರ ಸಂಬಂಧಿ ರಾಜ್ ಠಾಕ್ರೆ ಹಾಗೂ ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.