ಕರ್ನಾಟಕ

karnataka

ETV Bharat / bharat

ಡಿಕೆಶಿ ಆರೋಗ್ಯದಲ್ಲಿ ಏರುಪೇರು; ಸಿದ್ದು ಭೇಟಿಗೆ ಅವಕಾಶ ನಿರಾಕರಣೆ - ಆರ್​​ಎಂಎಲ್ ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಡಿ.ಕೆ ಶಿವಕುಮಾರ್​ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ

By

Published : Sep 12, 2019, 10:03 PM IST

Updated : Sep 12, 2019, 11:25 PM IST

ನವದೆಹಲಿ/ಬೆಂಗಳೂರು:ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ನಿರಾಸೆಯಾಗಿದೆ. ಇಡಿ ಅಧಿಕಾರಿಗಳು ಮಾಜಿ ಸಚಿವರ ಜೊತೆ ಮಾತುಕತೆ ನಡೆಸಲು ಅವಕಾಶ ನಿರಾಕರಿಸಿದ್ದು, ಆಸ್ಪತ್ರೆಯಿಂದ ಹಿಂತಿರುಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ

ಹಲವು ನಾಯಕರ ಭೇಟಿ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಪಾಲ್ಗೊಂಡ ನಂತರ ಸಿದ್ದರಾಮಯ್ಯ, ಕಾಂಗ್ರೆಸ್​ನ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿ ಸಮಾಲೋಚಿಸಿದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಅಹಮದ್ ಪಟೇಲ್ ಭೇಟಿಯಾಗಿ ಮಾತುಕತೆ ನಡೆಸದ್ದಾರೆ. ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭೇಟಿಯಾಗಿದ್ದು ಮಾತುಕತೆ ನಡೆಸಿದ್ದಾರೆ.

ರಾಜ್ಯ ಕಾಂಗ್ರೆಸ್ ಪ್ರತಿಪಕ್ಷದ ನಾಯಕರ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆಯಿತು. ಒಂದೆರಡು ದಿನಗಳಲ್ಲಿ ಅಧಿಕೃತ ಹೆಸರು ಪ್ರಕಟವಾಗಲಿದ್ದು, ಸಿದ್ದರಾಮಯ್ಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Last Updated : Sep 12, 2019, 11:25 PM IST

ABOUT THE AUTHOR

...view details