ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಉಸಿರಾಟದ ತೊಂದರೆಯಿಂದ ಅರುಣ್ ಜೇಟ್ಲಿ ಬಳಲುತ್ತಿರುವ ಕಾರಣ ಅವರನ್ನ ಹೃದಯರೋಗ ವಿಭಾಗದಲ್ಲಿರಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಏಮ್ಸ್ಗೆ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ ಸಚಿವ ಹರ್ಷವರ್ಧನ್, ಗೃಹ ಸಚಿವ ಅಮಿತ್ ಶಾ ಸೇರಿ ಪ್ರಮುಖರು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಏಮ್ಸ್ ಆಸ್ಪತ್ರೆಗೆ ದಾಖಲಾದ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ... ಹಾಸ್ಪಿಟಲ್ಗೆ ದೌಡಾಯಿಸಿದ ಅಮಿತ್ ಶಾ!
ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಏಮ್ಸ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ.
ಕಳೆದ 18 ತಿಂಗಳಿಂದ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಜೇಟ್ಲಿ, ಮೋದಿ 2.0 ಸಂಪುಟದಲ್ಲಿ ಸಚಿವ ಸ್ಥಾನದಿಂದ ದೂರ ಇರಲು ನಿರ್ಧರಿಸಿದ್ದರು. ಜತೆಗೆ ಈಗಾಗಲೇ ಕಳೆದ ವರ್ಷ ನ್ಯೂಯಾರ್ಕ್ನಲ್ಲಿ ಚಿಕಿತ್ಸೆ ಸಹ ಪಡೆದುಕೊಂಡು ಬಂದಿದ್ದರು.
66 ವರ್ಷದ ಅರುಣ್ ಜೇಟ್ಲಿ ಕಳೆದ ವರ್ಷ ಕಿಡ್ನಿ ಕಸಿ ಮಾಡಿಸಿಕೊಂಡಿದ್ದರು. ಜತೆಗೆ ಸತತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದು, ಇದೀಗ ಏಮ್ಸ್ನ ಹೃದಯರೋಗ ವಿಭಾಗದಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. 2019ರ ಲೋಕಸಭಾ ಚುನಾವಣೆಯಿಂದ ಜೇಟ್ಲಿ ಹೊರಗುಳಿದಿದ್ದರು. ಜತೆಗೆ ತಮಗೆ ಯಾವುದೇ ರೀತಿಯ ಜವಾಬ್ದಾರಿ ನೀಡದಂತೆ ಮೋದಿ ಬಳಿ ಮನವಿ ಮಾಡಿದ್ದರು.