ನವದೆಹಲಿ:ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಅನಾರೋಗ್ಯದ ಹಿನ್ನೆಲೆಯಲ್ಲಿ17ನೇ ಲೋಕಸಭಾ ಚುನಾವಣಾ ಕಣದಿಂದ ಅವರು ಹಿಂದೆ ಸರಿದಿದ್ದರು. ಬಿಜೆಪಿ ಪಾಲಿನ ಫೈರ್ಬ್ರ್ಯಾಂಡ್ ನಾಯಕಿ ಎಂದೇ ಗುರುತಿಸಿಕೊಂಡಿದ್ದ ಸುಷ್ಮಾ ಸ್ವರಾಜ್ ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವ ಕಾರಣಕ್ಕೆ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರು. ಮೂತ್ರ ಪಿಂಡ ವೈಫಲ್ಯದ ಕಾರಣ ವಿದೇಶಾಂಗ ಇಲಾಖೆ ಸಚಿವೆಯಾಗಿದ್ದಾಗಲೇ ಸುಷ್ಮಾ ಸ್ವರಾಜ್ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಈಗ ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ಅವರನ್ನ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಇಹಲೋಕ ತ್ಯಜಿಸಿದ್ದಾರೆ.
ಏಮ್ಸ್ ಆಸ್ಪತ್ರೆಗೆ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಅವರ ಆರೋಗ್ಯ ಮಾಹಿತಿ ಪಡೆದುಕೊಂಡಿದ್ದರು. ತುರ್ತು ನಿಗಾ ಘಟಕದಲ್ಲಿ ಐವರು ವೈದ್ಯರ ನೇತೃತ್ವದ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತು.ಆದರೆ, ಕೊನೆಗೂ ಚಿಕಿತ್ಸೆ ಫಲಕಾರಿಯಾಗದೇ ಸುಷ್ಮಾ ಸ್ವರಾಜ್ ಸಾವನ್ನಪ್ಪಿದ್ದಾರೆ.