ಗಾಂಧಿನಗರ (ಗುಜರಾತ್): ಗುಜರಾತ್‌ನ ಮಾಜಿ ಸಿಎಂ ಕೇಶುಭಾಯ್ ಪಟೇಲ್ ತಮ್ಮ 92ನೇ ವಯಸ್ಸಿನಲ್ಲಿ ಉಸಿರಾಟ ತೊಂದರೆಯಿಂದ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಗುಜರಾತ್‌ನ ಮಾಜಿ ಸಿಎಂ ಕೇಶುಭಾಯ್ ಪಟೇಲ್ ನಿಧನ - ಗುಜರಾತ್ ರಾಜಕೀಯ
ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೇಶುಭಾಯ್ ಪಟೇಲ್ ನಿಧನ
ಬಿಜೆಪಿಯ ಹಿರಿಯ ನಾಯಕರಾಗಿದ್ದ ಕೇಶುಭಾಯ್ ಪಟೇಲ್ 1995ರಲ್ಲಿ ಹಾಗೂ 1998ರಿಂದ 2001ರವರೆಗೆ ಎರಡು ಬಾರಿ ಸಿಎಂ ಆಗಿ ಕಾರ್ಯ ನಿರ್ವಹಿಸಿದ್ದರು.
ಆರು ಬಾರಿ ಶಾಸಕಾಂಗಕ್ಕೆ ಆಯ್ಕೆಯಾದ ಅವರು 2012ರಲ್ಲಿ ಬಿಜೆಪಿ ತೊರೆದು ಗುಜರಾತ್ ಪರಿವರ್ತನ್ ಪಾರ್ಟಿ ಎಂಬ ಹೊಸ ಪಕ್ಷ ಕಟ್ಟಿದ್ದರು. 2012ರಲ್ಲಿ ವಿಸವದಾರ್ ಕ್ಷೇತ್ರದಿಂದ ಆಯ್ಕೆಯಾಗಿದ್ದು 2014ರಲ್ಲಿ ಅನಾರೋಗ್ಯದ ಕಾರಣದಿಂದ ರಾಜೀನಾಮೆ ನೀಡಿದ್ದರು.