ನವದೆಹಲಿ:ತೀವ್ರ ಸಾಲದ ಸುಳಿಗೆ ಸಿಲುಕಿದ ಇನ್ಫ್ರಾಸ್ಟ್ರಕ್ಚರ್ ಲೀಸಿಂಗ್ ಆ್ಯಂಡ್ ಫೈನಾನ್ಶಿಯಲ್ ಸರ್ವಿಸ್ (ಐಎಲ್ಆ್ಯಂಡ್ಎಫ್ಎಸ್) ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿ (ಸಿಇಒ) ರಮೇಶ್ ಬಾವಾ ಅವರನ್ನು ಬಂಧಿಸಲಾಗಿದೆ.
ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಾವಾ ಅವರನ್ನು ಕಂಪನಿ ಕಾಯ್ದೆ ಸೆಕ್ಷನ್ 447 ಅಡಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.