ನವದೆಹಲಿ:ದೇಶಾದ್ಯಂತ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚು ಹಬ್ಬುತ್ತಿದ್ದು, ಇದೀಗ ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ಹಾಗೂ ಭಾರತೀಯ ಜನತಾ ಪಾರ್ಟಿ ಮುಖಂಡ ಚೇತನ್ ಚೌಹಾಣ್ಗೂ ಕೊರೊನಾ ಪಾಸಿಟಿವ್ ತಗುಲಿರುವುದು ಕನ್ಫರ್ಮ್ ಆಗಿದೆ.
ಈ ಹಿಂದೆ ಉತ್ತರ ಪ್ರದೇಶದ ಸಚಿವರಾಗಿದ್ದ ಚೌಹಾಣ್, ಟೀಂ ಇಂಡಿಯಾ ಪರ 40 ಟೆಸ್ಟ್ ಪಂದ್ಯ ಹಾಗೂ 7 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನ ಪ್ರತಿನಿಧಿಸಿದ್ದರು.
ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಜತೆ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದ ಚೌಹಾಣ್, ಟೆಸ್ಟ್ ಪಂದ್ಯಗಳಿಂದ 2,084ರನ್ಗಳಿಕೆ ಮಾಡಿದ್ದು, ಟೆಸ್ಟ್ ಪಂದ್ಯದಲ್ಲಿ 97ರನ್ ಇವರ ಅತ್ಯಧಿಕ ಸ್ಕೋರ್ ಆಗಿದೆ.
ಇದಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಚೇತನ್ ಚೌಹಾಣ್ ಜೀಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದಿದ್ದು, ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಜತೆಗೆ ಬಿಗ್ ಬಿ ಹಾಗೂ ಚೇತನ್ಜೀಗೆ ಈ ರಾತ್ರಿ ಕಠಿಣ ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಚೇತನ್ ಚೌಹಾಣ್ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಷಿಯೇಷನ್ ಜತೆ ನಿಕಟ ಸಂಪರ್ಕ ಹೊಂದಿದ್ದರು.