ಕರ್ನಾಟಕ

karnataka

ETV Bharat / bharat

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಹೆಚ್​ ಡಿ ದೇವೇಗೌಡ

ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ಹೆಚ್​.ಡಿ. ದೇವೇಗೌಡರು ರಾಜ್ಯಸಭಾ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

former pm  H D Deve Gowda
ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ

By

Published : Sep 20, 2020, 12:08 PM IST

Updated : Sep 20, 2020, 3:57 PM IST

ನವದೆಹಲಿ:ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಳಗ್ಗೆ 9 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದ ದೇವೇಗೌಡರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಈ ವೇಳೆ ದೇವೇಗೌಡರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ

ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದ ದೇವೇಗೌಡರು ಕೋವಿಡ್ ನಿರ್ಬಂಧವಿದ್ದ ಕಾರಣದಿಂದ ಜುಲೈ 22ರಂದು ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.

ವೈದ್ಯರ ಸಲಹೆ ಮೇರೆಗೆ ದೇವೇಗೌಡರು ಪ್ರಮಾಣ ವಚನಕ್ಕೆ ಗೈರಾಗಿ, ಮಾನ್ಸೂನ್ ಅಧಿವೇಶನದ ವೇಳೆ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದರು. ಅದರಂತೆ ಇಂದು ಪದಗ್ರಹಣ ಮಾಡಿದ್ದಾರೆ.

Last Updated : Sep 20, 2020, 3:57 PM IST

ABOUT THE AUTHOR

...view details