ಕರ್ನಾಟಕ

karnataka

ETV Bharat / bharat

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್​​ಗೆ ದಾಖಲು - ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲು ಸುದ್ದಿ

ಎದೆ ನೋವಿನ ಹಿನ್ನೆಲೆ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲು
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲು

By

Published : May 10, 2020, 10:46 PM IST

Updated : May 10, 2020, 11:09 PM IST

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಡಿಯೋ-ಥೊರಾಸಿಕ್ ವಾರ್ಡ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಇಂದು ರಾತ್ರಿ 8.45ಕ್ಕೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಮನಮೋಹನ್ ಸಿಂಗ್​ಗೆ 87 ವರ್ಷ ವಯಸ್ಸಾಗಿದೆ. ಸುಮಾರು​ 10 ವರ್ಷಗಳ ಕಾಲ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿರುವ ಇವರು ಕಾಂಗ್ರೆಸ್​ನಿಂದ ಪ್ರಧಾನಿ ಹುದ್ದೆಗೆ ಆಯ್ಕೆಯಾಗಿದ್ದರು. 2004 ಮೇ 22ರಿಂದ 2014 ಮೇ 26ರವರೆಗೆ ಅಧಿಕಾರದಲ್ಲಿದ್ದು, ಸೇವೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಕೇಂದ್ರ ಹಣಕಾಸು ಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದರು.

Last Updated : May 10, 2020, 11:09 PM IST

ABOUT THE AUTHOR

...view details