ನವದೆಹಲಿ: ಶಸ್ತ್ರಚಿಕಿತ್ಸೆ ಬಳಿಕ ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಗಿದೆ.
ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.
ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ
ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ನಿನ್ನೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ರಾತ್ರಿ ದೆಹಲಿಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಇದೀಗ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ರಾಜಕೀಯ ನಾಯಕರು ಪ್ರಣಬ್ ಮುಖರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.