ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಸೋಂಕು ದೃಡವಾಗಿದೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಪಾಸಿಟಿವ್ - ಪ್ರಣಬ್ ಮುಖರ್ಜಿ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಸ್ವಯಂ ಕ್ವಾರಂಟೈನ್ಗೆ ಒಳಪಟ್ಟು, ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಪ್ರಣಬ್ ಮುಖರ್ಜಿ ಮನವಿ ಮಾಡಿದ್ದಾರೆ.
ಪ್ರಣಬ್ ಮುಖರ್ಜಿ
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ತಿಳಿಸಿದ ಪ್ರಣಬ್ ಮುಖರ್ಜಿ, ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿದಾಗ ಕೊರೊನಾ ಪರೀಕ್ಷೆ ನಡೆಸಿದ್ದು, ವರದಿ ಪಾಸಿಟಿವ್ ಬಂದಿದೆ. ಕಳೆದೊಂದು ವಾರದಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲಾ ದಯವಿಟ್ಟು ಸ್ವಯಂ ಕ್ವಾರಂಟೈನ್ಗೆ ಒಳಪಟ್ಟು, ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.