ನವದೆಹಲಿ: ಎದೆನೋವು ಕಾಣಿಸಿಕೊಂಡಿದ್ದರಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೇ 10ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕಾರ್ಡಿಯೋ-ಥೋರಾಸಿಕ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಹೃದ್ರೋಗ ತಜ್ಞ ಡಾ. ನಿತೀಶ್ ನಾಯ್ಕ್ ನೇತೃತ್ವದ ತಂಡ ಚಿಕಿತ್ಸೆ ನೀಡಿದೆ. 2009ರಲ್ಲೂ ಇವರಿಗೆ ಹೃದಯದ ಬೈಪಾಸ್ ಸರ್ಜರಿ ಮಾಡಲಾಗಿತ್ತು.