ಪಾಲಿ(ರಾಜಸ್ಥಾನ):ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನ್ರೇಗಾ) ಅಡಿ ನಡೆಯುತ್ತಿದ್ದ ಕೆಲಸ ವೀಕ್ಷಣೆ ಮಾಡಲು ತೆರಳಿದ್ದ ಕಾಂಗ್ರೆಸ್ ಮಾಜಿ ಶಾಸಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಇದೀಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಮನ್ರೇಗಾ ಯೋಜನೆ ವೀಕ್ಷಣೆಗೆ ತೆರಳಿದ್ದ ಕಾಂಗ್ರೆಸ್ ಮಾಜಿ ಶಾಸಕನ ಮೇಲೆ ಹಲ್ಲೆ! - ಕಾಂಗ್ರೆಸ್ ಮಾಜಿ ಶಾಸಕ
ಮನ್ರೇಗಾ ಯೋಜನೆಯಡಿ ನಡೆಯುತ್ತಿದ್ದ ಕೆಲಸ ವೀಕ್ಷಣೆ ಮಾಡಲು ತೆರಳಿದ್ದ ಕಾಂಗ್ರೆಸ್ ಮಾಜಿ ಶಾಸಕನ ಮೇಲೆ ಹಲ್ಲೆ ನಡೆಸಲಾಗಿದೆ.
ಮಾಜಿ ಶಾಸಕ ಭೀಮರಾಜ್ ಭತಿ ಹಲ್ಲೆಗೊಳಗಾದ ಮಾಜಿ ಶಾಸಕ. ಕಲಾಲಿ ಗ್ರಾಮದಲ್ಲಿ ನಡೆಯುತ್ತಿದ್ದ ಕೆಲಸ ವೀಕ್ಷಣೆ ಮಾಡಲು ತೆರಳಿದ್ದ ವೇಳೆ ಕೆಲ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಅವರನ್ನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ 10 ದಿನಗಳಿಂದಲೂ ನರೇಗಾ ಯೋಜನೆಯಡಿ ನಡೆಯುತ್ತಿದ್ದ ಕೆಲಸವನ್ನ ಕಾಂಗ್ರೆಸ್ ಮುಖಂಡ ವೀಕ್ಷಣೆ ಮಾಡ್ತಿದ್ದರು. ಆದರೆ ಇಂದು ಬೆಳಗ್ಗೆ ಸ್ಥಳಕ್ಕೆ ಹೋಗುತ್ತಿದ್ದಂತೆ ಅವರ ಮೇಲೆ ಕೆಲವರು ದಾಳಿ ನಡೆಸಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆ ಘಟನಾ ಸ್ಥಳಕ್ಕೆ ತೆರಳಿರುವ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.ಅವರ ಮೇಲೆ ದಾಳಿ ನಡೆದಿರುವ ಮಾಹಿತಿ ಗೊತ್ತಾಗುತ್ತಿದ್ದಂತೆ ಆಸ್ಪತ್ರೆ ಹೊರಗಡೆ ಅನೇಕ ಜನರು ಜಮಾವಣೆಗೊಂಡಿದ್ದರು.