ಲಕ್ನೋ (ಉತ್ತರ ಪ್ರದೇಶ):ಬೆಂಗಳೂರನ ಡಿ.ಜೆ.ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನವೀನ್ ತಲೆ ತಂದವರಿಗೆ 51 ಲಕ್ಷ ರೂ.ಗಳ ಬಹುಮಾನ ಘೋಷಿಸುವ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪದ ಮೇಲೆ ಲಖನೌದಲ್ಲಿ ಮಾಜಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಶಹಜೇಬ್ ರಿಜ್ವಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸೋದರಳಿಯ ನವೀನ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯುತ ಪೋಸ್ಟ್ ಮಾಡಿದ್ದು, ಪೂರ್ವ ಬೆಂಗಳೂರಿನ ಭಾಗಗಳಾದ ಡಿ.ಜೆ.ಹಳ್ಳಿ ಹಾಗು ಕೆ.ಜಿ.ಹಳ್ಳಿ ಗಲಭೆಗೆ ಕಾರಣವಾಗಿತ್ತು.