ಕರ್ನಾಟಕ

karnataka

ETV Bharat / bharat

ದೆಹಲಿಯ ಅಕ್ಷರಧಾಮ ದೇಗುಲದ ಬಳಿ ಘಟನೆ; ಪೊಲೀಸರ ಮೇಲೆ ದುಷ್ಕರ್ಮಿಗಳಿಂದ ಗುಂಡು - ನವದೆಹಲಿಯ ಅಕ್ಷರ್ಧಮ್ ದೇವಸ್ಥಾನ

ಇಂದು ಮುಂಜಾನೆ ದೆಹಲಿಯ ಪ್ರಸಿದ್ಧ ಅಕ್ಷರಧಾಮ ದೇವಸ್ಥಾನದ ಬಳಿ ಪೊಲೀಸ್ ತಂಡದ ಮೇಲೆ ನಾಲ್ವರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಪೊಲೀಸರ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಗುಂಡಿನ ದಾಳಿ..!

By

Published : Sep 22, 2019, 2:00 PM IST

ನವದೆಹಲಿ: ಇಂದು ಮುಂಜಾನೆ ದೆಹಲಿಯ ಅಕ್ಷರಧಾಮ ದೇವಸ್ಥಾನದ ಬಳಿ ಪೊಲೀಸ್ ತಂಡದ ಮೇಲೆ ನಾಲ್ವರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾದ ಘಟನೆ ನಡೆದಿದೆ.

ವಾಹನವೊಂದರಲ್ಲಿ ತೆರಳುತ್ತಿದ್ದ ನಾಲ್ವರ ಅನುಮಾನಸ್ಪದ ಚಲನವಲನ ಕಂಡ ಪೊಲೀಸರು ವಾಹನ ನಿಲ್ಲಿಸುವಂತೆ ಸೂಚಿಸಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಪೊಲೀಸರಿಗೆ ಗಾಯಗಳಾಗಿರುವ ಕುರಿತು ಮಾಹಿತಿ ತಿಳಿದು ಬಂದಿಲ್ಲ. ಈ ಕುರಿತ ತನಿಖೆ ಮುಂದುವರೆದಿದೆ.

ABOUT THE AUTHOR

...view details