ನವದೆಹಲಿ: ಭಾರತ ಹಾಗೂ ಚೀನಾ ನಡುವೆ ನಡೆದ ಘರ್ಷಣೆಯಲ್ಲಿದ್ದ ಇನ್ನೂ ನಾಲ್ವರು ಭಾರತೀಯ ಸೈನಿಕರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸೋಮವಾರ ಸಂಜೆ ಪೂರ್ವ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಘರ್ಷಣೆ ನಡೆದಿದ್ದು, ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ದೃಢಪಡಿಸಿತ್ತು. ಇದೇ ವೇಳೆ ಚೀನಾದ ಕಮಾಂಡಿಂಗ್ ಆಫೀಸರ್ ಸೇರಿ 43 ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.