ಕೃಷ್ಣಾ: ರಸ್ತೆ ಅಪಘಾತವೊಂದರಲ್ಲಿ ಕರ್ನಾಟಕದ ವ್ಯಕ್ತಿ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಜಗ್ಗಯ್ಯಪೇಟ ತಾಲೂಕಿನ ಗರಿಕಪಾಡುವಿನಲ್ಲಿ ನಡೆದಿದೆ.
ಹೈದರಾಬಾದ್ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಮಾರುತಿ ಎರ್ಟಿಗಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಎದರುಗಡೆ ವಿಜಯವಾಡದಿಂದ ಹೈದರಾಬಾದ್ ಕಡೆಗೆ ಬರುತ್ತಿದ್ದ ಕಾರಿನ ಮೇಲೆ ಬಿದ್ದಿದೆ.
ಇನ್ನು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ತೆಲಂಗಾಣದ ಖಮ್ಮಂ ಜಿಲ್ಲೆಯ ನಾರಪೋಗು ಗೋಪಯ್ಯ, ಮಹಾಬೂಬ್ ನಗರ್ ಜಿಲ್ಲೆಯ ಭೀಂ ರೆಡ್ಡಿ, ಆಂಧ್ರ ಪ್ರದೇಶದ ಮನ್ಸೂರ್ ಮತ್ತು ಕರ್ನಾಟಕ ಮೂಲದ ಮಟ್ಟಪಲ್ಲಿ ಭೀಮ್ ರೆಡ್ಡಿ ಎಂದು ಗುರುತಿಸಲಾಗಿದೆ.
ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.