ಗಢವಾ (ಛತ್ತೀಸ್ಗಢ):ಸೆಪ್ಟಿಕ್ ಟ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಗಢವಾ ಜಿಲ್ಲೆಯ ಕಾಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೆಪ್ಟಿಕ್ ಟ್ಯಾಂಕ್ನಲ್ಲಿ ಉಸಿರುಗಟ್ಟಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು - ಕಾರ್ಮಿಕರ ಸಾವು
ಸೆಪ್ಟಿಕ್ ಟ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಕಾಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಾತಿನಿಧಿಕ ಚಿತ್ರ
ಮೃತರೆಲ್ಲರೂ ದೂಮರ್ಸೋಟಾ ಗ್ರಾಮಕ್ಕೆ ಸೇರಿದವರಾಗಿದ್ದಾಗಿದ್ದು, ಮಿಥಿಲೇಶ್ ಕುಮಾರ್ ಮೆಹ್ತಾ(40), ನಾಗೇಂದ್ರ ಕುಮಾರ್ ಮೆಹ್ತಾ(20), ಅನಿಲ್ ಕುಮಾರ್ ಮೆಹ್ತಾ (35) ಹಾಗೂ ಪ್ರವೀಣ್ ಕುಮಾರ್ ಮೆಹ್ತಾ ಎಂದು ಗುರುತಿಸಲಾಗಿದೆ.
ಘಟನೆಯ ನಂತರ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಹಾಗೂ ದುರ್ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಸದ್ಯಕ್ಕೆ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.