ಜಡ್ಚೆರ್ಲಾ (ತೆಲಂಗಾಣ): ಲಾರಿ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ... ಮಗು ಸೇರಿ ಒಂದೇ ಕುಟುಂಬದ ನಾಲ್ವರು ಬಲಿ - ತೆಲಂಗಾಣದಲ್ಲಿ ರಸ್ತೆ ಅಪಘಾತಕ್ಕೆ ನಾಲ್ವರು ಸಾವು
ಮೆಹಬೂಬ್ನಗರ ಜಿಲ್ಲೆಯ ಜಡ್ಚೆರ್ಲಾ ಬಳಿ ಲಾರಿ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ
ತೆಲಂಗಾಣದ ಮೆಹಬೂಬ್ನಗರ ಜಿಲ್ಲೆಯ ಜಡ್ಚೆರ್ಲಾ ಬಳಿ ಈ ದುರ್ಘಟನೆ ಸಮಭವಿಸಿದೆ. ನರೇಶ್ ಎಂಬುವರು ಆತನ ಸಹೋದರಿ, ಭಾವ ಮತ್ತು ಅವರ ಮಕ್ಕಳೊಂದಿಗೆ ಆಟೋದಲ್ಲಿ ಊರಿಗೆ ತೆರಳುತ್ತಿದ್ದರು. ಈ ವೇಳೆ ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ನರೇಶ್ ಮತ್ತು ಅವರ ಸಹೋದರಿ, ಆಕೆಯ ಗಂಡ ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐದು ವರ್ಷದ ಹಯಾತಿ ಎಂಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.