ಕರ್ನಾಟಕ

karnataka

ETV Bharat / bharat

ಜಮ್ಮು-ಕಾಶ್ಮೀರ: ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ - ಶೋಪಿಯನ್​ ಎನ್​ಕೌಂಟರ್​

An encounter has started at Amshipora area of Shopian
ಎನ್​ಕೌಂಟರ್​

By

Published : Jul 18, 2020, 5:49 AM IST

Updated : Jul 18, 2020, 10:40 AM IST

05:47 July 18

ಜಮ್ಮು-ಕಾಶ್ಮೀರ: ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶೋಪಿಯಾನ್ ಎನ್​ಕೌಂಟರ್

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. 

ಅಂಶಿಪೋರ ಗ್ರಾಮದ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಭದ್ರತಾ ಪಡೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಎನ್​ಕೌಂಟರ್​ನಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್​ಒ) ಮಾಹಿತಿ ನೀಡಿದ್ದಾರೆ.  

ನಿನ್ನೆಯಷ್ಟೇ ಕುಲ್ಗಾಂನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಎಂ) ಸಂಘಟನೆಯ ಓರ್ವನನ್ನು ಸೇರಿ ಒಟ್ಟು ಮೂವರು ಭಯೋತ್ಪಾದಕರನ್ನು ಕೊಲ್ಲಲಾಗಿತ್ತು.

Last Updated : Jul 18, 2020, 10:40 AM IST

ABOUT THE AUTHOR

...view details