ಕರ್ನಾಟಕ

karnataka

ETV Bharat / bharat

'ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ ನೀತಿ ಸಂಹಿತೆಯ ಉಲ್ಲಂಘನೆಯಲ್ಲ' - ಬಿಹಾರ ರಾಜ್ಯ ವಿಧಾನಸಭಾ ಚುನಾವಣೆ

ಬಿಹಾರ ಚುನಾವಣೆಗೆ ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೊರೊನಾ ವೈರಸ್ ಲಸಿಕೆ ನೀಡುವುದಾಗಿ, ಬಿಜೆಪಿ ನೀಡಿದ ಭರವಸೆಯು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

Free coronavirus vaccine promise not violation of poll code
ಚುನಾವಣಾ ಆಯೋಗ

By

Published : Oct 31, 2020, 3:59 PM IST

ನವದೆಹಲಿ: ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ ನೀಡುವ ಭರವಸೆಯನ್ನು ನೀಡಿತ್ತು. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟ ಪಡಿಸಿದೆ.

ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅವರ ದೂರಿನ ವಿಚಾರವಾಗಿ ಪ್ರತಿಕ್ರಿಯಿಸಿದ ಆಯೋಗವು, ಈ ವಿಚಾರದಲ್ಲಿ ಮಾದರಿ ಸಂಹಿತೆಯ ನಿಬಂಧನೆಗಳ ಉಲ್ಲಂಘನೆ ಕಂಡುಬಂದಿಲ್ಲ ಎಂದು ಹೇಳಿದೆ.

ಚುನಾವಣಾ ಸಮಯದಲ್ಲಿ ಕೇಂದ್ರ ಸರ್ಕಾರವು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದು, ಭರವಸೆಗಳ ಮೂಲಕ ಮತ ಸೆಳೆಯಲು ಬಿಜೆಪಿ ಯತ್ನಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ದೂರಿದ್ದರು.

ಈ ಕುರಿತಾಗಿ ಆಯೋಗವು ಮಾದರಿ ನೀತಿ ಸಂಹಿತೆಯ ಭಾಗ VIII ರಲ್ಲಿರುವ ಚುನಾವಣಾ ಪ್ರಣಾಳಿಕೆಯ ಕೆಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿ, ಉಚಿತ ಲಸಿಕೆ ಭರವಸೆ ಉಲ್ಲಂಘನೆಯಲ್ಲ ಎಂದು ತೀರ್ಮಾನಿಸಿರುವುದಾಗಿ ತಿಳಿದು ಬಂದಿದೆ.

ABOUT THE AUTHOR

...view details