ಕರ್ನಾಟಕ

karnataka

ETV Bharat / bharat

ಬಾರಾಮುಲ್ಲಾದಲ್ಲಿ ಗುಂಡಿನ ಚಕಮಕಿ: ಯೋಧ ಹುತಾತ್ಮ, ಇಬ್ಬರು ಉಗ್ರರು ಹತ - ಉತ್ತರ ಕಾಶ್ಮೀರ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೆರಿ ಪ್ರದೇಶದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮನಾಗಿದ್ದು, ಮತ್ತೋರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದಕ್ಕೂ ಮುಂಚಿತವಾಗಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾರಮುಲ್ಲದಲ್ಲಿ ಗುಂಡಿನ ಚಕಮಕಿ
ಬಾರಮುಲ್ಲದಲ್ಲಿ ಗುಂಡಿನ ಚಕಮಕಿ

By

Published : Aug 18, 2020, 12:20 PM IST

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೆರಿ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಾಯಗೊಂಡ ಸೈನಿಕನನ್ನು ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಿನ್ನೆ ತಡರಾತ್ರಿಯವರೆಗೂ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿ, ಕತ್ತಲೆ ಆವರಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details