ಕರ್ನಾಟಕ

karnataka

ETV Bharat / bharat

ಗಾಲ್ವನ್ ಘರ್ಷಣೆ: ಸುಮಾರು 76 ಭಾರತೀಯ ಯೋಧರಿಗೆ ಗಾಯ... ಸೇನಾ ಮೂಲಗಳಿಂದ ಮಾಹಿತಿ - 76 ಭಾರತೀಯ ಸೈನಿಕರಿಗೆ ಗಾಯ

ಲಡಾಖ್​ನ ಗಾಲ್ವನ್ ಕಣಿವೆಯಲ್ಲಿ ಸೋಮವಾರ ತಡರಾತ್ರಿ ಭಾರತ-ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ಸುಮಾರು 76 ಭಾರತೀಯ ಸೈನಿಕರು ಗಾಯಗೊಂಡಿದ್ದಾರೆಂದು ಸೇನಾ ಮೂಲಗಳು ತಿಳಿಸಿವೆ.

At least 76 Indian soldiers suffered injuries
ಸುಮಾರು 76 ಭಾರತೀಯ ಸೈನಿಕರಿಗೆ ಗಾಯ

By

Published : Jun 18, 2020, 10:58 PM IST

ನವದೆಹಲಿ:ಲಡಾಖ್​ನಗಾಲ್ವನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಸುಮಾರು 76 ಭಾರತೀಯ ಸೈನಿಕರು ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.

ಗಾಯಗೊಂಡ ಯೋಧರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, 18 ಸೈನಿಕರು ಲೇಹ್​​ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ. ಈ 18 ಸೈನಿಕರು ಚಿಕಿತ್ಸೆ ನಂತರ ಮುಂದಿನ 15 ದಿನಗಳಲ್ಲಿ ಕರ್ತವ್ಯಕ್ಕೆ ಮರಳಲಿದ್ದಾರೆ ಎಂದು ಹೇಳಿದೆ.

ಅಲ್ಲದೆ ಸುಮಾರು 58 ಸೈನಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದೆ. ಈ 58 ಸೈನಿಕರು ಒಂದು ವಾರಗಳ ಕಾಲ ಚಿಕಿತ್ಸೆ ನಂತರ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಹೇಳಿದೆ. ಘರ್ಷಣೆ ವೇಳೆ ಭಾರತದ ಯಾವುದೇ ಸೈನಿಕರು ಕಾಣೆಯಾಗಿಲ್ಲ ಎಂದು ಭಾರತೀಯ ಸೇನೆ ಈಗಾಗಲೆ ಸ್ಪಷ್ಟಪಡಿಸಿದೆ.

ಲಡಾಖ್​ನ ಗಾಲ್ವನ್ ಕಣಿವೆಯಲ್ಲಿ ಸೋಮವಾರ ತಡರಾತ್ರಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಇತ್ತ ಚೀನಾದ 45 ಮಂದಿ ಸೈನಿರು ಸತ್ತಿರಬಹುದು ಅಥವಾ ಗಾಯಗೊಂಡಿರಬಹುದು ಎಂದು ಮೂಲಗಳು ತಿಳಿಸಿವೆ.

ABOUT THE AUTHOR

...view details