ಕರ್ನಾಟಕ

karnataka

ETV Bharat / bharat

ಸಾಮೂಹಿಕ ಅತ್ಯಾಚಾರ ಪ್ರಕರಣ: ಚಿಕಿತ್ಸೆ ಫಲಿಸದೆ ಸಂತ್ರಸ್ತೆ ಸಾವು - ದೆಹಲಿಯ ಸಫ್ತರ್​ಜಂಗ್​ ಆಸ್ಪತ್ರೆ

ಸೆಪ್ಟಂಬರ್​ 14 ರಂದು ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾಳೆ.

gang assault victim in hathras dies in delhi safdarjung hospital during treatment
ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಸಾವು

By

Published : Sep 29, 2020, 10:24 AM IST

ದೆಹಲಿ: ಸೆಪ್ಟಂಬರ್​ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ದೆಹಲಿಯ ಸಫ್ತರ್​ಜಂಗ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಚಂದಪಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಯುವತಿ ಮೇಲೆ ಸೆಪ್ಟಂಬರ್ 14 ರಂದು ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ ನಂತರ, ಕಾಮುಕರು ಆಕೆಯ ಮೇಲೆ ಹಲ್ಲೆ ಮಾಡಿದ್ದರು. ಯುವತಿಯನ್ನು ಚಿಕಿತ್ಸೆಗಾಗಿ ಅಲಿಘಡ್​ನ ಜೆ ಎನ್ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿನ್ನೆ, ಸಂತ್ರಸ್ತೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಫ್ತರ್​ಜಂಗ್​ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸೆಪ್ಟಂಬರ್ 14 ರಂದು ಈ ಘಟನೆ ನಡೆದಿದ್ದು, ತನ್ನ ತಾಯಿಯೊಂದಿಗೆ ಹೊಲಕ್ಕೆ ಹೋದಾಗ 4-5 ಜನ ದುರುಳರು ಸಾಮೂಹಿಕ ಅತ್ಯಾಚಾರವೆಸಗಿ ಬರ್ಬರವಾಗಿ ಹಲ್ಲೆ ನಡೆಸಿದ್ದರು.

ಯುವತಿಯ ಶವವನ್ನು ಸಂಜೆಯ ವೇಳೆಗೆ ಗ್ರಾಮಕ್ಕೆ ತರಲಾಗುವುದು, ನಂತರ ಅಂತ್ಯಕ್ರಿಯೆಯನ್ನು ಗ್ರಾಮದಲ್ಲಿಯೇ ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details