ನಾಗಪುರ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಾಗಪುರದಲ್ಲಿ ನಡೆದಿದ್ದು, ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ.
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಕಾಮುಕರು ಅಂದರ್! - gang rape
15 ವರ್ಷದ ಬಾಲಕಿ ತನ್ನ ಸ್ನೇಹಿತನಿಗಾಗಿ ಕಾಯುತ್ತಿದ್ದ ವೇಳೆ ಇಬ್ಬರು ಯುವಕರು ಆಕೆಯನ್ನು ಬಲವಂತವಾಗಿ ಕಾಡಿಗೆ ಕರೆದೊಯ್ದು, ದೌರ್ಜನ್ಯ ಎಸಗಿದ್ದಾರೆ. ಈ ಸಂಬಂಧ ಸಿಸಿಟಿವಿ ಸಾಕ್ಷ್ಯಗಳನ್ನ ಪರಿಶೀಲಿಸಿ ಇಬ್ಬರು ಯುವಕರನ್ನು ಬಂಧಿಸುವಲ್ಲಿ ನಾಗಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಕಾಮುಕರು ಅಂದರ್!
15 ವರ್ಷದ ಬಾಲಕಿ ತನ್ನ ಸ್ನೇಹಿತನಿಗಾಗಿ ಕಾಯುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಅಲ್ಲಿಗೆ ಬಂದಿದ್ದಾರೆ. ಬಳಿಕ ಆಕೆಯನ್ನು ಬಲವಂತವಾಗಿ ಕಾಡಿಗೆ ಕರೆದುಕೊಂಡು ಹೋಗಿದ್ದಾರೆ. ಯುವಕರು ಬಾಲಕಿ ಮೇಲೆ ದೌರ್ಜನ್ಯ ಎಸಗಿ ಬಳಿಕ ಆಕೆಯನ್ನು ಮನೆಗೆ ತಂದು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಸಾಕ್ಷ್ಯಗಳನ್ನ ಪರಿಶೀಲಿಸಿ ಇಬ್ಬರು ಯುವಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಂಶಾದ್ ಅನ್ಸಾರಿ ಮತ್ತು ಬಬಲೂ ಕತ್ವಟೆ ಬಂಧಿತ ಆರೋಪಿಗಳು.