ರಾಂಚಿ:ಜಾರ್ಖಂಡ್ನ ರಾಂಚಿಯಲ್ಲಿರುವ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. 12 ಮಂದಿ ಪಾಪಿಗಳು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಎಲ್ಲ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಕಾನೂನು ವಿವಿ ವಿದ್ಯಾರ್ಥಿನಿ ಮೇಲೆ 12 ಮಂದಿ ಕಾಮುಕರಿಂದ ಗ್ಯಾಂಗ್ ರೇಪ್ - ಸಾಮೂಹಿಕ ಅತ್ಯಾಚಾರ ಲೇಟೆಸ್ಟ್ ನ್ಯೂಸ್
ರಾಂಚಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮೇಲೆ 12 ಜನ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗ್ಯಾಂಗ್ ರೇಪ್
ಮಂಗಳವಾರ ರಾತ್ರಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿನಿಯು ತನ್ನ ಸ್ನೇಹಿತನೊಂದಿಗೆ ಕುಳಿತಿದ್ದ ವೇಳೆ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಶಸ್ತ್ರಾಸ್ತ್ರಗಳೊಂದಿಗೆ ಬಂದಿದ್ದ ಕಾಮುಕರು ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುವ ಮುನ್ನ ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಆಕೆಯನ್ನು ಹತ್ತಿರದ ಗ್ರಾಮವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಬುಧವಾರ ತಡರಾತ್ರಿವರೆಗೂ ಹುಡುಕಾಟ ನಡೆಸಿದ್ದ ಪೊಲೀಸರು ಇದೀಗ 12 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Last Updated : Nov 28, 2019, 7:44 PM IST