ನವದೆಹಲಿ:ಪೂರ್ವ ದೆಹಲಿಯ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ನಾಪತ್ತೆಯಾಗಿದ್ದಾರೆ ಎಂದು ದೆಹಲಿಯಲ್ಲಿ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು.
ಇದೇ ನವೆಂಬರ್ 15ರಂದು ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಕುರಿತು ನಗರಾಭಿವೃದ್ಧಿ ಸಮಿತಿಯು ಸಂಸದೀಯ ಸ್ಥಾಯಿ ಸಮಿತಿ ಸಭೆಯನ್ನು ಕರೆದಿತ್ತು. ಈ ಸಭೆಗೆ ಸಂಸದ ಗೌತಮ್ ಗಂಭೀರ್ ಗೈರಾಗಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ ಗೌತಮ್ ಗಂಭೀರ್ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಅಂಟಿಸಲಾಗಿತ್ತು.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಂಸದ ಗೌಭೀರ್, ನಾನು ರಾಜಕೀಯಕ್ಕೆ ಬಂದಿದ್ದು ಏಪ್ರಿಲ್ ತಿಂಗಳಿನಲ್ಲಿ. ಆದರೆ, ಜನವರಿ ತಿಂಗಳಲ್ಲೇ ವೀಕ್ಷಕ ವಿವರಣೆ ಮಾಡುವುದಾಗಿ ಒಪ್ಪಂದಕ್ಕೆ ಸಹಿ ಹಾಕಿದ್ದೆ. ಹೀಗಾಗಿ ಸಭೆಗೆ ಹಾಜರಾಗಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ನನಗೆ ನವೆಂಬರ್ 11ರಂದು ನನಗೆ ಮೇಲ್ ಬಂದಿತ್ತು. ಅಂದೇ ನಾನು ಸಭೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದೆ. ಈ ಮೀಟಿಂಗ್ನ ಮಹತ್ವ ನನಗೂ ತಿಳಿದಿದೆ. ಆದರೆ, ಮೊದಲೇ ಒಪ್ಪಂದಕ್ಕೆ ಸಹಿ ಮಾಡಿದ ಕಾರಣಕ್ಕೆ ಕಟ್ಟುಬಿದ್ದು ಸಭೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದಿದ್ದಾರೆ.