ಹೈದಾರಾಬಾದ್ : ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ( ಜಿಹೆಚ್ಎಂಸಿ) ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ತೆಲಂಗಾಣ ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದೆ ಜೆಹೆಚ್ಎಂಸಿ ಚುನಾವಣೆ
ಹೆಚ್ಚಿನ ಪಕ್ಷಗಳ ಅಭಿಪ್ರಾಯ ಪರಿಗಣಿಸಿ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ..
ಮಾನ್ಯತೆ ಪಡೆದ ಮತ್ತು ನೋಂದಾಯಿತ 50 ರಾಜಕೀಯ ಪಕ್ಷಗಳ ಪೈಕಿ, 26 ಪಕ್ಷಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿವೆ. ಅವುಗಳಲ್ಲಿ 13 ರಾಜಕೀಯ ಪಕ್ಷಗಳು ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕು ಎಂದು ಹೇಳಿವೆ. ಮೂರು ಪಕ್ಷಗಳು ಇವಿಎಂ ಮೂಲಕ ನಡೆಸುವಂತೆ ಅಭಿಪ್ರಾಯ ವ್ಯಕ್ತಪಡಿಸಿವೆ.
ಹೆಚ್ಚಿನ ಪಕ್ಷಗಳು ಬ್ಯಾಲೆಟ್ ಪೇಪರ್ ಪರ ಒಲವು ತೋರಿರುವ ಹಿನ್ನೆಲೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಇತ್ತೀಚಿನ ಗ್ರಾಮ ಪಂಚಾಯತ್ ಚುನಾವಣೆಯ ಜೊತೆಗೆ, 2020ರಲ್ಲಿ ನಡೆದ ಪುರಸಭೆ, ಎಂಪಿಟಿಸಿ ಮತ್ತು ಝೆಡ್ಪಿಟಿಸಿ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕವೇ ನಡೆಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಕಾರ್ಪೊರೇಶನ್ ಚುನಾವಣೆ ಜೊತೆಗೆ ಜೆಹೆಚ್ಎಂಸಿ ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.