ಕರ್ನಾಟಕ

karnataka

ETV Bharat / bharat

ಭಾರತದ ಕಂಟ್ರೋಲರ್& ಆಡಿಟರ್ ಜನರಲ್ ಆಗಿ ಗಿರೀಶ್ ಚಂದ್ರ ಮುರ್ಮು ಪ್ರಮಾಣ ವಚನ - ಕಂಟ್ರೋಲರ್ ಮತ್ತು ಆಡಿಟರ್ ಜನರಲ್

ಜಮ್ಮು ಮತ್ತು ಕಾಶ್ಮೀರ ಮಾಜಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Girish Chandra Murmu takes oath as CAG
ಗಿರೀಶ್ ಚಂದ್ರ ಮುರ್ಮು ಪ್ರಮಾಣ ವಚನ

By

Published : Aug 8, 2020, 12:17 PM IST

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಜಮ್ಮು ಮತ್ತು ಕಾಶ್ಮೀರ ಮಾಜಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಅವರು ಮುರ್ಮು ಅವರಿಗೆ ಸಿಎಜಿ ಆಗಿ ಪ್ರಮಾಣವಚನ ಮತ್ತು ಗೌಪತ್ಯ ಬೋಧಿಸಿದರು. 1985ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಮುರ್ಮು ಬುಧವಾರ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ ಕೇಂದ್ರಾಡಳಿತ ಪ್ರದದೇಶವಾಗಿ ಘೋಷಣೆ ಮಾಡಿದ ನಂತರ ಕೇಂದ್ರಾಡಳಿತ ಪ್ರದೇಶಗಳು ಮೊದಲ ವಾರ್ಷಿಕೋತ್ಸವ ಆಚರಿಸುವ ಸಂದರ್ಭದಲ್ಲಿ ಮುರ್ಮು ರಾಜೀನಾಮೆ ಕುತೂಹಲಕ್ಕೆ ಕಾರಣವಾಗಿತ್ತು.

ಗುಜರಾತ್ ಕೇಡರ್​ನ 60 ವರ್ಷದ ಮಾಜಿ ಐಎಎಸ್ ಅಧಿಕಾರಿ ಕಳೆದ ವರ್ಷ ಅಕ್ಟೋಬರ್ 29 ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್​ನ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು ಹಣಕಾಸು ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿದ್ದರು. ಗುಜರಾತ್​ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರ ಪ್ರಧಾನ ಕಾರ್ಯದರ್ಶಿಯಾಗಿಯೂ ಮುರ್ಮು ಸೇವೆ ಸಲ್ಲಿಸಿದರು.

ಸಿಎಜಿಯನ್ನು ಆರು ವರ್ಷಗಳ ಅವಧಿಗೆ ನೇಮಕ ಮಾಡಲಾಗುತ್ತದೆ ಅಥವಾ ಅಧಿಕಾರದಲ್ಲಿರುವವರು 65 ವರ್ಷ ತುಂಬುವವರೆಗೆ ಕಾರ್ಯನಿರ್ವಹಿಸಬಹುದು. ಸಿಎಜಿ ಮುಖ್ಯವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಖಾತೆಗಳನ್ನು ಲೆಕ್ಕಪರಿಶೋಧಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತದೆ.

ABOUT THE AUTHOR

...view details