ಬಿಜ್ನೋರ್:ಅಫಜಲಗಢ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಬಾಲಕಿ ನೇಣಿಗೆ ಶರಣಾಗಿದ್ದಾಳೆ. ಸಂತ್ರಸ್ತ ಬಾಲಕಿಯ ಸಹೋದರಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ಮೊರೆ ಹೋಗಿದ್ದಾರೆ.
ಸಾಮೂಹಿಕ ಅತ್ಯಾಚಾರ: ಸಹೋದರಿಗೆ ಫೋನ್ ಮಾಡಿ ಆತ್ಮಹತ್ಯೆಗೆ ಶರಣಾದ ಬಾಲಕಿ! - ಬಿಜ್ನೋರ್ ಬಾಲಕಿ ಆತ್ಮಹತ್ಯೆ ಸುದ್ದಿ
ಉತ್ತರಪ್ರದೇಶದ ಬಿಜ್ನೋರ್ನಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗ್ರಾಮದ ಇಬ್ಬರು ಯುವಕರು ಆಕೆ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಬಾಲಕಿ ಈ ಹೆಜ್ಜೆ ಇಟ್ಟಿದ್ದಾಳೆ.
ಬಾಲಕಿ ವಿರುದ್ಧ ಗ್ರಾಮದ ಯುವಕರಿಬ್ಬರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಪೈಶಾಚಿಕ ಕೃತ್ಯ ನಡೆಯುತ್ತಿದ್ದಂತೆ ಬಾಲಕಿ ತನ್ನ ಹಿರಿಯ ಸಹೋದರಿಗೆ ಫೋನ್ ಮಾಡಿ ವಿಷಯ ಮುಟ್ಟಿಸಿದ್ದಾಳೆ. ಅತ್ಯಾಚಾರ ನಡೆದಿರುವ ಬಗ್ಗೆ ಮಾಹಿತಿ ಕೊಟ್ಟಿದ್ದಾಳೆ. ಇಷ್ಟೇ ಅಲ್ಲದೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಕಾಲ್ ಕಟ್ ಮಾಡಿದ್ದಾರೆ.
ಬಾಲಕಿ ತನ್ನ ಹಿರಿಯ ಸಹೋದರಿಗೆ ಫೋನ್ ಕಾಲ್ ಮಾಡಿದ ಬಳಿಕ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಬಳಿಕ ಸಂತ್ರಸ್ತ ಬಾಲಕಿಯ ಹಿರಿಯ ಸಹೋದರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.