ಬೋಲ್ಪುರ(ಪಶ್ಚಿಮ ಬಂಗಾಳ):ಮುಂದಿನ ವಿಧಾನಸಭೆ ಚುನಾವಣೆ ವೇಳೆನರೇಂದ್ರ ಮೋದಿಗೆ ಒಂದು ಅವಕಾಶ ಕೊಟ್ಟು ನೋಡಿ, ನಾವು 5 ವರ್ಷದಲ್ಲಿ ಪಶ್ಚಿಮ ಬಂಗಾಳವನ್ನು ಚಿನ್ನದ ಬಂಗಾಳ (ಸೋನಾರ್ ಬಾಂಗ್ಲಾ) ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮೋದಿಗೆ ಒಂದು ಅವಕಾಶ ಕೊಡಿ,'ಬಂಗಾರದ ಬಂಗಾಳ' ಮಾಡುತ್ತೇವೆ: ಅಮಿತ್ ಶಾ - ಕೇಂದ್ರ ಗೃಹ ಸಚಿವ ಅಮಿತ್ ಶಾ
ಬೋಲ್ಪುರದಲ್ಲಿ ರೋಡ್ ಶೋ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಮತಾ ದೀದಿ ಮೇಲೆ ಬಂಗಾಳದ ಜನರ ಕೋಪ ಈ ರೋಡ್‌ಶೋ ಮೂಲಕ ವ್ಯಕ್ತವಾಗುತ್ತಿದೆ ಎಂದಿದ್ದಾರೆ.
ಬೋಲ್ಪುರದಲ್ಲಿ ಅಮಿತ್ ಶಾ ರೋಡ್ ಶೋ
2021ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬೋಲ್ಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ರು.
'ನನ್ನ ಜೀವನದಲ್ಲಿ ನಾನು ಈ ರೀತಿಯ ರೋಡ್ ಶೋ ನೋಡಿಲ್ಲ. ಈ ರೋಡ್ ಶೋ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಬಂಗಾಳದ ಜನರ ಪ್ರೀತಿ ಮತ್ತು ವಿಶ್ವಾಸವನ್ನು ತೋರಿಸುತ್ತದೆ. ಇಲ್ಲಿನ ಜನರು ಬದಲಾವಣೆ ಬಯಸುತ್ತಿದ್ದಾರೆ. ಈ ರೋಡ್ ಶೋ ಮಮತಾ ದೀದಿ ಮೇಲೆ ಬಂಗಾಳದ ಜನರ ಕೋಪವನ್ನು ತೋರಿಸುತ್ತದೆ' ಎಂದಿದ್ದಾರೆ.