ಹೈದರಾಬಾದ್:ಕಿಲ್ಲರ್ ಕೊರೊನಾ ಪ್ರಪಂಚದಾದ್ಯಂತ ಬರೋಬ್ಬರಿ 1,13,71,646 ಮಂದಿಗೆ ಅಂಟಿದ್ದು, 5,32,856 ಸೋಂಕಿತರು ಮೃತಪಟ್ಟಿದ್ದಾರೆ. 64,32,994ಕ್ಕೂ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಒಟ್ಟು 188 ರಾಷ್ಟ್ರಗಳು ಕೋವಿಡ್ ಹೊಡೆತಕ್ಕೆ ಸಿಲುಕಿವೆ. 'ನಾವು ಅಂದುಕೊಂಡಷ್ಟು ಬೇಗ ವೈರಸ್ ವಿರುದ್ಧದ ಹೋರಾಟ ಮುಗಿಯುವುದಿಲ್ಲ' ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಎಚ್ಚರಿಸಿದ್ದಾರೆ
ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 29,35,427 ಇದ್ದು, ಮೃತರ ಸಂಖ್ಯೆ 1,32,313ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 15,78,376 ಪ್ರಕರಣಗಳು ಹಾಗೂ 64,365 ಸಾವುಗಳು ವರದಿಯಾಗಿದೆ.
ಗ್ಲೋಬಲ್ ಕೋವಿಡ್ 19 ಟ್ರ್ಯಾಕರ್ ಸೋಂಕಿತರ ಪೈಕಿ ರಷ್ಯಾ 3ನೇ ಸ್ಥಾನದಲ್ಲಿದ್ದು, ಈವರೆಗೆ 6,74,515 ಕೇಸ್ಗಳು ಹಾಗೂ ನಾಲ್ಕನೇ ಸ್ಥಾನದಲ್ಲಿರುವ ಭಾರತದಲ್ಲಿ 6,73,904 ಸೋಂಕಿತರು ಪತ್ತೆಯಾಗಿದ್ದಾರೆ.
ಕೋವಿಡ್ ಮೊಟ್ಟಮೊದಲು ಕಾಣಿಸಿಕೊಂಡು, ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಮತ್ತೆ ಕೇಸ್ಗಳು ಪತ್ತೆಯಾಗುತ್ತಿದೆ. 2019ರ ಡಿಸೆಂಬರ್ನಿಂದ ಈವರೆಗೆ ಚೀನಾದಲ್ಲಿ 83,553 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.