ಕರ್ನಾಟಕ

karnataka

By

Published : Sep 3, 2020, 5:17 PM IST

ETV Bharat / bharat

ವಿಶ್ವದಲ್ಲಿ 2.6 ಕೋಟಿ ಸೋಂಕಿತರು: 8.6 ಲಕ್ಷ ಮಂದಿ ಸಾವು, 1.8 ಕೋಟಿ ಮಂದಿ ಗುಣಮುಖ

ಕೋವಿಡ್​ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 62,90,737 ಇದ್ದು, ಮೃತರ ಸಂಖ್ಯೆ 1,89,964ಕ್ಕೆ ಏರಿಕೆಯಾಗಿದೆ. ವಿಶ್ವದಲ್ಲಿ 2.6 ಕೋಟಿ ಸೋಂಕಿತರಿದ್ದರೆ, 8.6 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಹೈದರಾಬಾದ್​:ಮಹಾಮಾರಿ ಆರ್ಭಟಕ್ಕೆ ತತ್ತರಿಸಿರುವ ಜಗತ್ತಿನಲ್ಲಿ 2,61,77,603 ಜನರಿಗೆ ಕೊರೊನಾ ವೈರಸ್​ ಅಂಟಿದ್ದು, 8,67,347 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,84,42,307 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 62,90,737 ಇದ್ದು, ಮೃತರ ಸಂಖ್ಯೆ 1,89,964ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 40,01,422 ಪ್ರಕರಣಗಳು ಹಾಗೂ 1,23,899 ಸಾವುಗಳು ವರದಿಯಾಗಿವೆ.

ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 38,48,968 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 67,486 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 10,05,000 ಕೇಸ್​ಗಳಿದ್ದು, 17,414 ಜನರು ಸಾವನ್ನಪ್ಪಿದ್ದಾರೆ.

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 85,077 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ABOUT THE AUTHOR

...view details