ಪಣಜಿ (ಗೋವಾ): ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವ ಕಾರಣ ಗೋವಾ ಕಾಂಗ್ರೆಸ್ ಮುಖ್ಯಸ್ಥ ಗಿರೀಶ್ ಚೋಡಂಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಗಿರೀಶ್ ಚೋಡಂಕರ್ ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.