ನವದೆಹಲಿ:ಮಹಾದಾಯಿ ಕಳಸಾ-ಬಂಡೂರಿ ಯೋಜನೆಯ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಗೋವಾ ಕಾಂಗ್ರೆಸ್ ಪತ್ರ ಬರೆದಿದೆ. ಮಹದಾಯಿ ಯೋಜನೆಗೆ ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ನೀಡಿರುವ ಅನುಮತಿಯ ಕುರಿತು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮಹದಾಯಿ ಕಳಸಾ-ಬಂಡೂರಿ ಯೋಜನೆಗೆ ಗೋವಾ ಕಾಂಗ್ರೆಸ್ ಕ್ಯಾತೆ: ಪ್ರಧಾನಿಗೆ ಪತ್ರ - ಮಹಾದಾಯಿ ಕಳಸಾ-ಬಂಡೂರಿ ಯೋಜನೆ
ಮಹದಾಯಿ ಕಳಸಾ-ಬಂಡೂರಿ ಯೋಜನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಗೋವಾ ಕಾಂಗ್ರೆಸ್ ಪತ್ರ ಬರೆದಿದೆ.
ಮಹಾದಾಯಿ ಕಳಸಾ-ಬಂಡೂರಿ ಯೋಜನೆ
ಸುಪ್ರೀಂ ಕೋರ್ಟ್ನಲ್ಲಿ ಇನ್ನೂ ಪ್ರಕರಣ ಬಾಕಿ ಇರುವಾಗಲೇ ಅನುಮತಿ ನೀಡಿದ್ದು ಆಘಾತಕಾರಿ. ನ್ಯಾಯಮಂಡಳಿ ಮತ್ತು ಗೋವಾದೊಂದಿಗೆ ಸಮಾಲೋಚಿಸದೆ ಅನುಮತಿ ನೀಡಿದ್ದು ಸರಿಯಲ್ಲ ಕಾಂಗ್ರೆಸ್ ಕ್ಯಾತೆ ತೆಗೆದಿದೆ.
ಗೋವಾ ರಾಜ್ಯವು ಪರಿಸರವಾಗಿ ದುರ್ಬಲ ಸ್ಥಿತಿಯಲ್ಲಿದ್ದು, ನಿಯಮಿತವಾಗಿ ಕುಡಿಯುವ ನೀರಿನ ಕೊರತೆಯನ್ನು ಎದುರಿಸುತ್ತಿದೆ ಎಂದು ಬರೆಯಲಾಗಿದೆ. ರಾಜ್ಯದ ಜೀವನಾಡಿಯಾಗಿರುವ ಮಹದಾಯಿ ನದಿಯಿಂದ ನೀರನ್ನು ತಿರುಗಿಸಲು ಗೋವಾ ಜನರು ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದೆ.