ಪಣಜಿ(ಗೋವಾ) :ಗೋವಾದ ಮೊದಲ ಕೊವಿಡ್ -19 ಪ್ರಕರಣ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.
85 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದ ಕೆಲವೇ ಗಂಟೆಗಳಲ್ಲಿ ಮೃತಪಟ್ಟಿದ್ದಾರೆ. ಅವರ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸುವುದಿಲ್ಲ, ಬದಲಾಗಿ ಅಂತಿಮ ವಿಧಿ ವಿಧಾನವನ್ನು ಸರ್ಕಾರಿ ಅಧಿಕಾರಿಗಳು ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.