ನವದೆಹಲಿ: ಖ್ಯಾತ ವಿಜ್ಞಾನಿ ಮತ್ತು ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳ ಪಿತಾಮಹ ವಿಕ್ರಮ್ ಸಾರಾಭಾಯಿ ಅವರ 100ನೇ ಜನ್ಮದಿನಕ್ಕೆ ಸೋಮವಾರ ಗೂಗಲ್ ಡೂಡಲ್ ಗೌರವ ಸಲ್ಲಿಸಿದೆ.
ವಿಶ್ವ ಕಿರಣಗಳ ತೀಕ್ಷ್ಣತೆಯಲ್ಲಿ ಉಂಟಾಗುವ ಬದಲಾವಣೆಗಳ ಬಗ್ಗೆ ಸಂಶೋಧನೆ ನಡೆಸಿದರು. ಹಾಗೂ ಅವುಗಳ ಕಾಲ ತೀಕ್ಷ್ಣತೆ ದಿನಕ್ಕೆ 2 ಬಾರಿ ಬದಲಾಗುವುದನ್ನು ಕಂಡುಹಿಡಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಜಗತ್ತಿನ ಹಲವು ರಾಷ್ಟ್ರಗಳ ಉಪಗ್ರಹವನ್ನು ಇಸ್ರೊ ಕಕ್ಷೆಗೆ ಸೇರಿಸುತ್ತಿದೆ. ಈ ಸಾಧನೆಗಳಿಗೆ ಮೂಲ ವಿಜ್ಞಾನಿ ವಿಕ್ರಮ್ ಸಾರಾಭಾಯಿ ಕಾರಣ.
ಸಾರಾಭಾಯಿ ಅವರು ಸ್ವಂತ ಹಣ ಖರ್ಚು ಮಾಡಿ ತಿರುವನಂತಪುರದಲ್ಲಿ ಬಾಹ್ಯಾಕಾಶ ಕುರಿತು ಸ್ವತಂತ್ರವಾಗಿ ಸಂಶೋಧನಾ ಸಂಸ್ಥೆ ಆರಂಭಿಸಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಅಂದಿನ ಪ್ರಯತ್ನವೇ ಇಂದಿನ ಬೆಳವಣಿಗೆಗೆ ಮೈಲಿಗಲ್ಲಾಗಿದೆ. ಅಹಮದಾಬಾದ್ನಲ್ಲಿ ಸ್ಪೇಸ್ ಅಪ್ಲಿಕೇಶನ್ ಸೆಂಟರ್, ಐಐಎಮ್ ಸ್ಥಾಪನೆ, ಇಸ್ರೊ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ಸೇರಿದಂತೆ ಹತ್ತು ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ.