ಮೈನ್ಪುರಿ(ಯುಪಿ):ದೇಶದಲ್ಲಿ ಪ್ರತಿದಿನ ಒಂದಿಲ್ಲೊಂದು ಅಮಾನವೀಯ ಕೃತ್ಯ ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಿದ್ದು, ಇದೀಗ ಉತ್ತರಪ್ರದೇಶದ ಮೈನ್ಪುರಿಯಲ್ಲಿ ಅಂತಹ ಮತ್ತೊಂದು ದುರ್ಘಟನೆ ನಡೆದಿದೆ.
ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ದೂರು... ವಿದ್ಯಾರ್ಥಿನಿಯ ಕೊಂದು ನೇಣು ಹಾಕಿದ ದುರುಳರು! - ವಿದ್ಯಾರ್ಥಿನಿ ಕೊಲೆ
ಲೈಂಗಿಕ ಕಿರುಕುಳ ನೀಡಿದ್ದ ಯುವಕರ ವಿರುದ್ಧ ದೂರು ನೀಡಿದ್ದಕ್ಕಾಗಿ ಆಕ್ರೋಶಗೊಂಡ ಇಬ್ಬರು, ವಿದ್ಯಾರ್ಥಿನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಇಬ್ಬರು ಯುವಕರ ವಿರುದ್ಧ ಆಕೆ ಶಿಕ್ಷಕರ ಬಳಿ ದೂರು ನೀಡಿದ್ದಳು. ಈ ವೇಳೆ ಆಕ್ರೋಶಗೊಂಡಿದ್ದ ಶಿಕ್ಷಕರು, ಅವರಿಬ್ಬರಿಗೆ ಹೊಡೆದು ಬುದ್ಧಿಮಾತು ಹೇಳಿದ್ದರು. ಆದರೆ ಇದರಿಂದ ಕುಪಿತಗೊಂಡಿದ್ದ ಅವರು, ವಿದ್ಯಾರ್ಥಿನಿ ಮನೆಗೆ ಹೋಗಿ ಆಕೆಯನ್ನು ಕೊಲೆ ಮಾಡಿದ್ದಾರೆ. ನಂತರ ಮೃತದೇಹವನ್ನ ನೇಣು ಹಾಕಿ ಅಲ್ಲಿಂದ ಪರಾರಿಯಾಗುವ ಪ್ರಯತ್ನ ನಡೆಸಿದ್ದಾರೆ.
ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಇನ್ನು ಏಕಾಏಕಿ ಮನೆಯೊಳಗೆ ನುಗ್ಗಿ ಕೃತ್ಯವೆಸಗಿ ಪರಾರಿಯಾಗುತ್ತಿದ್ದ ಇಬ್ಬರನ್ನು ನೆರೆಹೊರೆಯವರು ನೋಡಿ, ಅವರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.