ನವದೆಹಲಿ:ರಕ್ಷಣಾ ಇಲಾಖೆಯ ನಿರ್ವಹಣೆಯಲ್ಲಿ ಕೆಲವೊಂದು ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಇಲಾಖೆಯಲ್ಲಿ ಹೊಸ ಹುದ್ದೆ ಹಾಗೂ ಹೊಸ ಇಲಾಖೆಯನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ರಕ್ಷಣಾ ಇಲಾಖೆಯಲ್ಲಿ ಹೊಸ ಹುದ್ದೆ ಸೃಷ್ಟಿಸಲು ಕೇಂದ್ರ ಸರ್ಕಾರದ ನಿರ್ಧಾರ - Indian army latest news
ರಕ್ಷಣಾ ಇಲಾಖೆಯಲ್ಲಿ ಕೆಲ ಐತಿಹಾಸಿಕ ಸುಧಾರಣೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಕ್ಷಣಾ ಸಚಿವಾಲಯದೊಳಗೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ಹುದ್ದೆ ಹಾಗೂ ಮಿಲಿಟರಿ ವ್ಯವಹಾರಗಳ ಇಲಾಖೆಯನ್ನು ರಚಿಸಲಾಗುತ್ತಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್
ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ದೇಶದ ಉನ್ನತ ರಕ್ಷಣಾ ನಿರ್ವಹಣೆಯಲ್ಲಿ ಸುಧಾರಣೆಗಳನ್ನು ತರುವ ಉದ್ದೇಶದಿಂದ ರಕ್ಷಣಾ ಇಲಾಖೆಯಲ್ಲಿ ಕೆಲ ಐತಿಹಾಸಿಕ ಸುಧಾರಣೆ ತರಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಕ್ಷಣಾ ಸಚಿವಾಲಯದೊಳಗೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ಹುದ್ದೆ ಹಾಗೂ ಮಿಲಿಟರಿ ವ್ಯವಹಾರಗಳ ಇಲಾಖೆಯನ್ನು ರಚಿಸಲಾಗುತ್ತಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಸಿಡಿಎಸ್(ಚೀಫ್ ಆಫ್ ಡಿಫೆನ್ಸ್ ಸ್ಟಾಫ್) ರಚಿಸುವ ನಿರ್ಧಾರವು ಸಶಸ್ತ್ರ ಪಡೆಗಳ ನಡುವೆ ಜಂಟಿತ್ವವನ್ನು ತರುವ ಪ್ರಮುಖ ಹೆಜ್ಜೆಯಾಗಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.